ಈನಾಡು One India

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯ, ಶಾಸಕರು ರೆಸಾರ್ಟ್‌ಗೆ

5 days ago  
ಸುದ್ದಿ / One India/ News  
ಬೆಂಗಳೂರು, ಜನವರಿ 18 : ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯಗೊಂಡಿದೆ. ನಾಲ್ವರು ಶಾಸಕರು ಸಭೆಗೆ ಗೈರಾಗಿದ್ದು, 76 ಶಾಸಕರು ಹಾಜರಾಗಿದ್ದರು. ಶುಕ್ರವಾರ ಸಂಜೆ 4.30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಆರಂಭವಾಯಿತು. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಕೆಪಿಸಿಸಿ ಅಧ್ಯಕ್ಷ ದಿನೇಶ್..
                 

ರಾಜ್ಯ ರಾಜಕೀಯ: ಆದಿಚುಂಚನಗಿರಿ ಶ್ರೀಗಳ ಮಹತ್ವದ ಹೇಳಿಕೆ

5 days ago  
ಸುದ್ದಿ / One India/ News  
ಸದ್ಯ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ನಡುವೆ, ಆದಿಚುಂಚನಗಿರಿ ಸಂಸ್ಥಾನದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿಯವರು ನೀಡಿದ ಹೇಳಿಕೆ ಮಹತ್ವ ಪಡಿದಿದೆ. ಆಪರೇಷನ್ ಕಮಲದ ಉಸ್ತುವಾರಿಯನ್ನು ಬೆಂಗಳೂರು ಮಲ್ಲೇಶ್ವರಂ ಶಾಸಕ ಡಾ. ಅಶ್ವಥ್ ನಾರಾಯಣ ವಹಿಸಿಕೊಂಡಿದ್ದರು, ಇದರಿಂದ ಶ್ರೀಗಳು ಶಾಸಕರ ವಿರುದ್ದ ಫುಲ್ ಗರಂ ಆಗಿದ್ದರು ಎನ್ನುವ ಸುದ್ದಿ ಭಾರೀ ವೈರಲ್ ಆಗಿತ್ತು. ಸಿದ್ದರಾಮಯ್ಯ ಕೈಗೂ ಸಿಕ್ಕಿಲ್ಲ ರಮೇಶ್..
                 

ಯಡಿಯೂರಪ್ಪ ಸಿಎಂ ಆಗ್ತಾರೆ ಎಂದಿದ್ದ ಕೇರಳ ಜ್ಯೋತಿಷಿ ಮಾತು ನಿಜವಾಗುತ್ತಾ?

5 days ago  
ಸುದ್ದಿ / One India/ News  
ಬೆಂಗಳೂರು, ಜನವರಿ 18: "ಸಂಕ್ರಾಂತಿ ನಂತರ ನಿಮಗೆ ಒಳ್ಳೆಯ ದೆಸೆ ಇದೆ. ನೀವು ಮತ್ತೆ ಮುಖ್ಯಮಂತ್ರಿಯಾಗ್ತೀರಾ..." ಎಂದಿದ್ದ ಕೇರಳದ ಜ್ಯೋತಿಷಿಯೊಬ್ಬರ ಮಾತು ಬಿಜೆಪಿ ಶಾಸಕರನ್ನೆಲ್ಲ ಗುರುಗ್ರಾಮದ ರೆಸಾರ್ಟ್ ವರೆಗೆ ಕರೆದೊಯ್ದಿದೆ! ಆದರೆ 'ಆಪರೇಶನ್' ಫೇಲ್ಯೂರ್ ಆಗಿ, ಬಿಜೆಪಿಗೆ ಭ್ರಮನಿರಸನವಾಗಿದೆಯಾದರೂ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಲ್ಲಿ ಮಾತ್ರ ಭರವಸೆ ಬತ್ತಿಲ್ಲ. ತಾವು ಮುಖ್ಯಮಂತ್ರಿಯಾಗಿಯೇ ಆಗುತ್ತೇನೆ ಎಂಬ..
                 

ಕಾಂಗ್ರೆಸ್ ಶಾಸಕಾಂಗ ಸಭೆಗೆ 3 ರಿಂದ 6 ಮಂದಿ ಗೈರು ಸಾಧ್ಯತೆ?

5 days ago  
ಸುದ್ದಿ / One India/ News  
ಬೆಂಗಳೂರು, ಜನವರಿ 18: ಬಿಜೆಪಿಯ ಮಹತ್ವಾಕಾಂಕ್ಷಿಯ ಆಪರೇಷನ್ ಕಮಲ ಮತ್ತೊಮ್ಮೆ ವಿಫಲವಾಗಿದೆ. ರೆಸಾರ್ಟ್ ಗಳಲ್ಲಿದ್ದ ಶಾಸಕರು ಬೆಂಗಳೂರಿಗೆ ಮರಳುತ್ತಿದ್ದಾರೆ. ಇತ್ತ ಶುಕ್ರವಾರ(ಜನವರಿ 18) ಮಧ್ಯಾಹ್ನ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಗೆ ಯಾರು ಗೈರು ಹಾಜರಾಗಲಿದ್ದಾರೆ ಎಂಬ ಕುತೂಹಲ ಮನೆ ಮಾಡಿದೆ. ಕಾಂಗ್ರೆಸ್ ಶಾಸಕಾಂಗ ಸಭೆಗೆ ಹಾಜರಾಗದ ಶಾಸಕರ ವಿರುದ್ಧ ಪ್ರಬಲ ಅಸ್ತ್ರವನ್ನು ಶಾಸಕಾಂಗ ಪಕ್ಷದ ನಾಯಕ, ಮಾಜಿ..
                 

ಸಮ್ಮಿಶ್ರ ಸರ್ಕಾರ ಉಳಿಸಲು ಕಾಂಗ್ರೆಸ್‌ನ 5 ತಂತ್ರಗಳು!

7 days ago  
ಸುದ್ದಿ / One India/ News  
ಬೆಂಗಳೂರು, ಜನವರಿ 16 : ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಬೇಕು ಎಂಬುದು ಎರಡೂ ಪಕ್ಷಗಳ ಗುರಿಯಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರವನ್ನು ಉಳಿಸಲು ತಂತ್ರ ರೂಪಿಸಿದ್ದಾರೆ. ಬಿಜೆಪಿ ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಪ್ರಯತ್ನ ಮಾಡುತ್ತಿದೆ. ಈ ತಂತ್ರವನ್ನು ವಿಫಲಗೊಳಿಸಲು ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿ ತಂತ್ರ ರೂಪಿಸಿವೆ...
                 

ನಾಲ್ವರು ಸಚಿವರ ರಾಜೀನಾಮೆಗೆ ರಾಹುಲ್ ಗಾಂಧಿ ಸೂಚನೆ?

7 days ago  
ಸುದ್ದಿ / One India/ News  
ಬೆಂಗಳೂರು, ಜನವರಿ 16 : ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಪ್ರಯತ್ನ ಆರಂಭಿಸಿದೆ. ಅತೃಪ್ತ ಶಾಸಕರಿಗೆ ಸಚಿವ ಸ್ಥಾನದ ಆಫರ್‌ ಅನ್ನು ಪಕ್ಷ ನೀಡಲಿದ್ದು, ಇದಕ್ಕಾಗಿ ನಾಲ್ವರು ಸಚಿವರಿಗೆ ರಾಜೀನಾಮೆ ನೀಡಲು ಸೂಚನೆ ಕೊಡಲಾಗಿದೆ. ಹೌದು, ಕರ್ನಾಟಕದ ರಾಜಕೀಯ ಬೆಳವಣಿಗೆಗಳನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಗಮನಿಸುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಂದ ಮಾಹಿತಿಯನ್ನು..
                 

ದೇವೇಗೌಡ್ರ ಮನೆಯಲ್ಲಿ ಕುಮಾರಸ್ವಾಮಿ: ಮಣ್ಣಿನಮಗನ ಆಟವ ಬಲ್ಲವರಾರು?

7 days ago  
ಸುದ್ದಿ / One India/ News  
ರಾಜ್ಯ ರಾಜಕಾರಣದಲ್ಲಿ ಹಿಂದಿನಿಂದಲೂ ಒಂದು ಮಾತಿದೆ. 'ಎಲ್ಲರದ್ದೂ ಒಂದು ರಾಜಕೀಯವಾದರೆ, ದೇವೇಗೌಡರ ರಾಜಕೀಯವೇ ಇನ್ನೊಂದು' ಎಂದು. ಅದಕ್ಕೇ ಅವರನ್ನು 24X7 ಪೊಲಿಟಿಶಿಯನ್ ಎಂದು ಕರೆಯುವುದು. ಅದೇನೇ ಇರಲಿ.. ಸದ್ಯ ರಾಜ್ಯ ರಾಜಕೀಯಯದ 'ಮಕರ ಸಂಕ್ರಾಂತಿ ಆಪರೇಷನ್ ಕಮಲ' ಆವೃತ್ತಿಯಲ್ಲಿ, ಇಬ್ಬರು ಪಕ್ಷೇತರರು ಸಮ್ಮಿಶ್ರ ಸರಕಾರಕ್ಕೆ ವಿದಾಯ ಹೇಳಿರುವುದು ಸುದ್ದಿ. ಮುಳಬಾಗಿಲು ಶಾಸಕ ಎಚ್.ನಾಗೇಶ್ ಮತ್ತು ರಾಣೆಬೆನ್ನೂರು ಶಾಸಕ..
                 

ಲೋಕಸಭಾ ಚುನಾವಣೆ : ಜೆಡಿಎಸ್ ಬೇಡಿಕೆ ಇಟ್ಟಿರುವ ಕ್ಷೇತ್ರಗಳ ಪಟ್ಟಿ

14 days ago  
ಸುದ್ದಿ / One India/ News  
ಬೆಂಗಳೂರು, ಜನವರಿ 09 : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆದರೆ, ಸೀಟು ಹಂಚಿಕೆ ಬಗ್ಗೆ ಉಭಯ ಪಕ್ಷಗಳು ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. '12 ಲೋಕಸಭಾ ಕ್ಷೇತ್ರಗಳನ್ನು ಕಾಂಗ್ರೆಸ್ ಬಿಟ್ಟುಕೊಡಬೇಕು' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಜೆಡಿಎಸ್ ಪಟ್ಟಿ ಮಾಡಿರುವ 12 ಕ್ಷೇತ್ರಗಳಲ್ಲಿ ಹಲವು ಕಡೆ ಕಾಂಗ್ರೆಸ್‌ ಸಂಸದರು..
                 

ಕೈಕೊಟ್ಟ ಪಕ್ಷೇತರ ಶಾಸಕರು! ದೊಡ್ಡಗೌಡರು ಹೇಳಿದ್ದೇನು?

7 days ago  
ಸುದ್ದಿ / One India/ News  
ಬೆಂಗಳೂರು, ಜನವರಿ 16: "ಈ ವದಂತಿಗಳೆಲ್ಲ ಮಾಧ್ಯಮ ಸೃಷ್ಟಿಯಷ್ಟೆ. ಅಸಲಿಗೆ ಆತಂಕ ಪಡುವಂಥದ್ದು ಏನೂ ಇಲ್ಲ" ಎಂದು ಇಬ್ಬರು ಪಕ್ಷೇತರ ಶಾಸಕರು ಬೆಂಬಲ ವಾಪಸ್ ಪಡೆದ ಬಗ್ಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ರಾಜ್ಯದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಈಗಾಗಲೇ ದಿಗಿಲು ಆರಂಭವಾಗಿದೆ. ಎಲ್ಲವೂ ಸರಿ ಇದೆ ಎಂದು ಮೇಲ್ನೋಟಕ್ಕೆ ನಾಯಕರು ಹೇಳಿಕೊಂಡು ಬರುತ್ತಿದ್ದರೂ,..
                 

ಬ್ರೇಕಿಂಗ್ ನ್ಯೂಸ್ : ಇಬ್ಬರು ಶಾಸಕರಿಂದ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್

8 days ago  
ಸುದ್ದಿ / One India/ News  
ಬೆಂಗಳೂರು, ಜನವರಿ 15 : ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಇಬ್ಬರು ಶಾಸಕರು ವಾಪಸ್ ಪಡೆದರು. ಬಿಜೆಪಿ ಬೆಂಬಿಸುವುದಾಗಿ ಇಬ್ಬರು ಶಾಸಕರು ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಮಂಗಳವಾರ ಮಧ್ಯಾಹ್ನ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್.ನಾಗೇಶ್ ಮತ್ತು ರಾಣೆಬೆನ್ನೂರು ಕ್ಷೇತ್ರದ ಕೆಪಿಜೆಪಿ ಶಾಸಕ ಆರ್.ಶಂಕರ್ ಸರ್ಕಾರಕ್ಕೆ ನೀಡಿರುವ..
                 

ಕರ್ನಾಟಕದಲ್ಲಿರುವ ಒಟ್ಟು ಲೋಕಸಭಾ ಕ್ಷೇತ್ರಗಳು ಎಷ್ಟು, ಯಾವವು?

14 days ago  
ಸುದ್ದಿ / One India/ News  
ದೇಶದಲ್ಲಿ ಈಗಾಗಲೇ ಲೋಕಸಭಾ ಚುನಾವಣೆಯ ಗೌಜು ಆರಂಭವಾಗಿದೆ. 2019 ರ ಏಪ್ರಿಲ್ -ಮೇ ತಿಂಗಳಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಭಾರೀ ಕುತೂಹಲ ಕೆರಳಿಸಿದ್ದು, ರಾಜಕೀಯ ಪಕ್ಷಗಳು ಈಗಾಗಲೇ ಗೆಲ್ಲಲು ಅಗತ್ಯವಿರುವ ಕಸರತ್ತು ಶುರುಮಾಡಿವೆ. ದಕ್ಷಿಣ ಭಾರತದಲ್ಲಿ ಲೋಕಸಭಾ ಚುನಾವಣೆಯ ಮೇಲೆ ಮಹತ್ವದ ಪರಿಣಾಮ ಬೀರಬಲ್ಲ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳದ್ದೇ..
                 

ಬಿಜೆಪಿ ಪಂಥಾಹ್ವಾನ ಸ್ವೀಕರಿಸಿ, ಸಿದ್ದರಾಮಯ್ಯರಿಂದ ಟ್ವೀಟ್!

7 days ago  
ಸುದ್ದಿ / One India/ News  
ಬೆಂಗಳೂರು, ಜನವರಿ 16: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂಬ ಬೆಳವಣಿಗೆ ಕುರಿತಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ವಾರ್ ಶುರು ಮಾಡಿದ್ದಾರೆ. ಆಪರೇಷನ್ ಕಮಲದ ಸವಾಲನ್ನು ಸ್ವೀಕರಿಸಿ, ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಂತಿದೆ. ಹರ್ಯಾಣದ ಗುರುಗ್ರಾಮದಲ್ಲಿ ಶಾಸಕರನ್ನು ಬಿಜೆಪಿ ಇರಿಸಿಕೊಂಡಿರುವುದರಿಂದ ಪ್ರಧಾನಿ ಮೋದಿಗೆ ಟ್ವೀಟ್ ಮಾಡಿ, ಶಾಸಕರನ್ನು ಕಾಯುವ ಚೌಕಿದಾರ್ ಆಗಿಬಿಟ್ಟಿದ್ದೀರಾ?..
                 

ಆಡಳಿತ ನನ್ನ ಕೈಯಲಿಲ್ಲ, ಕಾಂಗ್ರೆಸ್‌ ಕೈಯಲ್ಲಿದೆ: ಕುಮಾರಸ್ವಾಮಿ ಅಸಮಾಧಾನ

14 days ago  
ಸುದ್ದಿ / One India/ News  
ಬೆಂಗಳೂರು, ಜನವರಿ 09: ಮಿತ್ರ ಪಕ್ಷ ಕಾಂಗ್ರೆಸ್‌ ಮೇಲೆ ಮತ್ತೆ ಅಸಮಾಧಾನ ಹೊರಹಾಕಿರುವ ಸಿಎಂ ಕುಮಾರಸ್ವಾಮಿ, 'ಕಾಂಗ್ರೆಸ್ ನನ್ನ ಕೈ ಕಟ್ಟಿಹಾಕಿದೆ' ಎಂದು ಅಳಲು ತೋಡಿಕೊಂಡಿದ್ದಾರೆ. ನಿನ್ನೆ ರಾತ್ರಿ ನಡೆದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿರುವ ಕುಮಾರಸ್ವಾಮಿ, ಈ ಮೈತ್ರಿ ಸರ್ಕಾರ ನನ್ನ ನಿಯಂತ್ರಣದಲ್ಲಿಲ್ಲ ಎಲ್ಲವೂ ಕಾಂಗ್ರೆಸ್‌ ಹಿಡಿತದಲ್ಲಿದೆ ಎಂದು ಬೇಸರ ಹೊರಹಾಕಿದ್ದಾರೆ. ಲೋಕಸಭಾ ಚುನಾವಣೆ :..